Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:13 - ಕನ್ನಡ ಸತ್ಯವೇದವು C.L. Bible (BSI)

13 ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಟಗರಿಗೆ ಆರು ಸೇರೂ ಕುರಿಯೊಂದಕ್ಕೆ ಮೂರು ಸೇರೂ ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:13
4 ತಿಳಿವುಗಳ ಹೋಲಿಕೆ  

ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,


ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.


ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು.


“ಸರ್ವೇಶ್ವರನಾದ ನನಗೆ ಸುವಾಸನೆ ಕಾಣಿಕೆಯಾಗಿ ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರೆಸಿದ ಆರುಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು