Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:2 - ಕನ್ನಡ ಸತ್ಯವೇದವು C.L. Bible (BSI)

2 “ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:2
32 ತಿಳಿವುಗಳ ಹೋಲಿಕೆ  

ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಹೌದು, ಉದ್ಧಾರದ ಮಾರ್ಗದಲ್ಲಿರುವವರಿಗೂ ವಿನಾಶಮಾರ್ಗದಲ್ಲಿರುವವರಿಗೂ ಕ್ರಿಸ್ತಯೇಸುವೇ ದೇವರಿಗರ್ಪಿಸಿದ ಪರಿಮಳದಂತೆ ನಾವು ಇದ್ದೇವೆ.


ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.


“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು, ಇವುಗಳನ್ನೂ, ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ನಿನಗೆ ಕೇಡು! ಇದು ಸರ್ವೇಶ್ವರನಾದ ದೇವರ ನುಡಿ.


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಮತ್ತು ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನು ಸಮರ್ಪಿಸಬೇಕು.


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


“ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ:


ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.


‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.


ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು