ಅರಣ್ಯಕಾಂಡ 28:8 - ಕನ್ನಡ ಸತ್ಯವೇದವು C.L. Bible (BSI)8 ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |