ಅರಣ್ಯಕಾಂಡ 28:9 - ಕನ್ನಡ ಸತ್ಯವೇದವು C.L. Bible (BSI)9 ‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮವು, ಅದಕ್ಕೆ ಸೇರಿದ ಪಾನದ್ರವ್ಯವು ಇವುಗಳನ್ನಲ್ಲದೆ ನೀವು ಸಬ್ಬತ್‍ದಿನದಲ್ಲಿ ಹೆಚ್ಚಾಗಿ ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಗೋದಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 “ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.