Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:1 - ಕನ್ನಡ ಸತ್ಯವೇದವು C.L. Bible (BSI)

1 ‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತುತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:1
21 ತಿಳಿವುಗಳ ಹೋಲಿಕೆ  

ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


“ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.


ಸರ್ವೇಶ್ವರ ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಹೇಳಿದರು:


‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.


ಅಂದು ನೀವು ಸರ್ವೇಶ್ವರನಿಗೇ ಸುಗಂಧಕರವಾದ ಒಂದು ಹೋರಿ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು ಮತ್ತು ವರ್ಷದ ಏಳು ಕುರಿಗಳನ್ನು ಹಾಗು


‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.


ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.


‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು