Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:12 - ಕನ್ನಡ ಸತ್ಯವೇದವು C.L. Bible (BSI)

12 ‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:12
16 ತಿಳಿವುಗಳ ಹೋಲಿಕೆ  

ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


“ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”


ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸಿಸಬೇಕಾಗಿತ್ತು.


“ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.


“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.


ಆ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳನ್ನೂ ಅರ್ಪಿಸಬೇಕು. ಅವುಗಳ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತ ಆದ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.


ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.


‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು