Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:40 - ಕನ್ನಡ ಸತ್ಯವೇದವು C.L. Bible (BSI)

40 ಸರ್ವೇಶ್ವರಸ್ವಾಮಿ ಕೊಟ್ಟ ಈ ಎಲ್ಲ ಆಜ್ಞೆಗಳನ್ನು ಮೋಶೆ ಇಸ್ರಯೇಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರೇಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೆಹೋವ ದೇವರು ತನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮೋಶೆಯು ಇಸ್ರಾಯೇಲರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:40
9 ತಿಳಿವುಗಳ ಹೋಲಿಕೆ  

ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”


ಮೋಶೆ ಇಸ್ರಯೇಲರ ಕುಲನಾಯಕರಿಗೆ ಹೀಗೆಂದು ಹೇಳಿದನು: ಸರ್ವೇಶ್ವರ ಸ್ವಾಮಿಯ ಆಜ್ಞೆ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು