ಅರಣ್ಯಕಾಂಡ 29:6 - ಕನ್ನಡ ಸತ್ಯವೇದವು C.L. Bible (BSI)6 ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು. ಅಧ್ಯಾಯವನ್ನು ನೋಡಿ |