Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:7 - ಕನ್ನಡ ಸತ್ಯವೇದವು C.L. Bible (BSI)

7 ‘ಉಪವಾಸ ಆಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನ ನೀವು ಯಾವ ದುಡಿಮೆಯನ್ನು ಮಾಡದೆ ದೇವಾರಾಧನೆಗಾಗಿ ಸಭೆ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಉಪವಾಸಾಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮಾಡದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:7
17 ತಿಳಿವುಗಳ ಹೋಲಿಕೆ  

ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II


ಇಷ್ಟರಲ್ಲಿ ಬಹಳ ದಿನಗಳು ಕಳೆದಿದ್ದವು. ಉಪವಾಸದ ಮಹಾದಿನವೂ ಕಳೆದಿತ್ತು. ಈ ಕಾಲದಲ್ಲಿ ಸಮುದ್ರದಲ್ಲಿ ಮುಂದುವರಿಸುವುದು ಅಪಾಯಕರವಾಗಿತ್ತು.


ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು