Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:15 - ಕನ್ನಡ ಸತ್ಯವೇದವು C.L. Bible (BSI)

15 “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಲೇವಿಯರಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕೆಂದು ಆಜ್ಞಾಪಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಲೇವಿಯರನ್ನು ಅವರ ಕುಟುಂಬಗಳಿಗನುಗುಣವಾಗಿಯೂ ಗೋತ್ರಗಳಿಗನುಸಾರವಾಗಿಯೂ ಲೆಕ್ಕಿಸು. ಪ್ರತಿಯೊಬ್ಬ ಗಂಡಸನ್ನೂ ಒಂದು ತಿಂಗಳು ಮೇಲ್ಪಟ್ಟ ಪ್ರತಿಯೊಬ್ಬ ಗಂಡುಮಗುವನ್ನೂ ಲೆಕ್ಕಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:15
17 ತಿಳಿವುಗಳ ಹೋಲಿಕೆ  

ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ : 23,000 ಇತ್ತು.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಹೆಸರು ಹಿಡಿದು ಎಣಿಕೆಯಾದವರ , ಅಂದರೆ ಒಂದು ತಿಂಗಳ ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 22,273:


ಇವರಲ್ಲಿ ಎಣಿಕೆಯಾದ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 6,200:


ಅವರಲ್ಲಿ ದೇವಸ್ಥಾನ ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 8,600:


ಅವರಲ್ಲಿ ಎಣಿಕೆಯಾದ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 7,500:


ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ.


ಸ್ವಾಮಿಯ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಎಣಿಸಿದನು.


ಇಸ್ರಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು, ಅಂದರೆ ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸುಳ್ಳ ಎಲ್ಲರನ್ನು ಸೈನ್ಯ ಸೈನ್ಯವಾಗಿ ಪಟ್ಟಿಮಾಡಬೇಕು.


ಲೇವಿಯರಲ್ಲಿ ಎಣಿಕೆಯಾದ ಕುಟುಂಬಗಳು ಇವು : ಗೇರ್ಷೋನನಿಂದ ಗೇರ್ಷೋನ್ಯರು, ಕೆಹಾತನಿಂದ ಕೆಹಾತ್ಯರು ಮತ್ತು ಮೆರಾರೀಯನಿಂದ ಮೆರಾರೀಯರು, ಎಂಬ ವಂಶಸ್ಥರು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು