Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:16 - ಕನ್ನಡ ಸತ್ಯವೇದವು C.L. Bible (BSI)

16 ಸ್ವಾಮಿಯ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಎಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೋಶೆ ಯೆಹೋವನಿಗೆ ವಿಧೇಯನಾಗಿ ಅವರೆಲ್ಲರನ್ನೂ ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:16
11 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಯಂತೆ ಕೆಹಾತ್ಯರನ್ನು ಮೋಶೆ - ಆರೋನರು ಎಣಿಕೆಮಾಡಿದಾಗ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಜನ.


ಮೋಶೆ ಮತ್ತು ಆರೋನರು ಸರ್ವೇಶ್ವರನ ಅಪ್ಪಣೆಯ ಮೇರೆಗೆ ಕುಟುಂಬಗಳ ಪ್ರಕಾರ ಎಣಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 22,000:


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಮೆರಾರೀಯರನ್ನು ಮೋಶೆ - ಆರೋನರು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಇತ್ತು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಹಾಗು ಆರೋನರಿಂದ ಎಣಿಕೆಯಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಮಂದಿ.


ಗೇರ್ಷೋನ್ಯರು ಹೊರೆ ಹೊರುವುದರಲ್ಲೂ ಬೇರೆ ಪರಿಚರ್ಯ ಮಾಡುವುದರಲ್ಲೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.


ಸರ್ವೇಶ್ವರನ ಆಜ್ಞೆಯಂತೆ ವಿಮೋಚನೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.


ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.


“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.


ಲೇವಿಯ ಮಕ್ಕಳ ಹೆಸರುಗಳು ಇವು: ಗೇರ್ಷೋನ್, ಕೆಹಾತ್, ಮೆರಾರೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು