Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:4 - ಕನ್ನಡ ಸತ್ಯವೇದವು C.L. Bible (BSI)

4 ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಆಜ್ಞಾಪಿಸದ ಅಪವಿತ್ರ ಅಗ್ನಿಯಿಂದ ಧೂಪವನ್ನು ಸಮರ್ಪಿಸಿದರು. ಈ ಕಾರಣ ಸರ್ವೇಶ್ವರನ ಸನ್ನಿಧಿಯಲ್ಲಿ ಸತ್ತುಹೋದರು. ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಮಿಕ್ಕವರು ತಮ್ಮ ತಂದೆಯ ಕೈಕೆಳಗೆ ಯಾಜಕರಾಗಿ ಸೇವೆ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾದಾಬ್ ಅಬೀಹೂ ಎಂಬಿಬ್ಬರು ಸೀನಾಯಿ ಅರಣ್ಯದಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು; ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಈತಾಮಾರ್ ಎಂಬಿಬ್ಬರು ತಂದೆಯ ಕೈಕೆಳಗೆ ಯಾಜಕಧರ್ಮವನ್ನು ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಾದಾಬ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅಪ್ಪಣೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಆದ್ದರಿಂದ ನಾದಾಬ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡುಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:4
7 ತಿಳಿವುಗಳ ಹೋಲಿಕೆ  

ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸರ್ವೇಶ್ವರನ ಸನ್ನಿಧಿಯಲ್ಲಿ ಬಹಿಷ್ಕೃತ ಅಗ್ನಿಯಿಂದ ಧೂಪಾರತಿ ಎತ್ತಿದುದರಿಂದ ಸತ್ತುಹೋದರು.


ಸರ್ವೇಶ್ವರ ಮೋಶೆಗೆ ಇತ್ತ ಆಜ್ಞೆ ಇದು:


ಅದನ್ನು ನೀವು ಯಾಜಕ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಆತ ಅದನ್ನು ಪಾಳೆಯದ ಹೊರಗೆ ಹೊಡೆಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.


ಅವನನ್ನೂ ಅವನ ಮಗ ಎಲ್ಲಾಜಾರನನ್ನೂ ಕರೆದುಕೊಂಡು ನೀನು ಹೋರ್ ಬೆಟ್ಟವನ್ನು ಹತ್ತು.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು