Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:40 - ಕನ್ನಡ ಸತ್ಯವೇದವು C.L. Bible (BSI)

40 ಸರ್ವೇಶ್ವರ ಮೋಶೆಗೆ, “ನೀನು ಇಸ್ರಯೇಲರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಜೇಷ್ಠಪುತ್ರರನ್ನು ಹೆಸರು ಹಿಡಿದು ಎಣಿಕೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇದಲ್ಲದೆ ಯೆಹೋವನು ಮೋಶೆಗೆ, “ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇದಲ್ಲದೆ ಯೆಹೋವನು ಮೋಶೆಗೆ - ನೀನು ಇಸ್ರಾಯೇಲ್ಯರಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರುಹಿಡಿದು ಲೆಕ್ಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೆಹೋವನು ಮೋಶೆಗೆ, “ನೀನು ಇಸ್ರೇಲರ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರನ್ನು ಲೆಕ್ಕಿಸು. ಅವರ ಹೆಸರುಗಳ ಪಟ್ಟಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:40
13 ತಿಳಿವುಗಳ ಹೋಲಿಕೆ  

“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II


“ನೀನು ಇಸ್ರಯೇಲರ ಜೇಷ್ಠರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತು. ನಾನು ಸರ್ವೇಶ್ವರ!


“ನಾನು ಇಸ್ರಯೇಲರಲ್ಲಿ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನೇ ಆರಿಸಿಕೊಂಡಿದ್ದೇನೆಂದು ತಿಳಿ. ಆದುದರಿಂದ ಲೇವಿಯರು ನನಗೆ ಸೇರಿದವರು, ನನ್ನ ಸೊತ್ತು.


ಆದರೆ ಸರ್ವೇಶ್ವರನೆಂಬ ನನ್ನ ಸೊತ್ತಾಗುವುದಕ್ಕೆ ನೀನು ಇಸ್ರಯೇಲರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು