Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:50 - ಕನ್ನಡ ಸತ್ಯವೇದವು C.L. Bible (BSI)

50 ದೇವರ ಸೇವೆಗೆ ನಿಗದಿಯಾದ ನಾಣ್ಯದ ಮೇರೆಗೆ 1365 ನಾಣ್ಯಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ 1365 ರೂಪಾಯಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಮೋಶೆಯು ಇಸ್ರೇಲರಲ್ಲಿ ಚೊಚ್ಚಲಾದ ಗಂಡಸರಿಂದ ಬೆಳ್ಳಿಯನ್ನು ಸಂಗ್ರಹಿಸಿದನು. ಅವನು ಅಧಿಕೃತ ಅಳತೆಯನ್ನು ಉಪಯೋಗಿಸಿ 1,365 ಶೆಕಲ್ ಬೆಳ್ಳಿಯನ್ನು ಸಂಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:50
9 ತಿಳಿವುಗಳ ಹೋಲಿಕೆ  

ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಅದರಂತೆಯೇ ಮೋಶೆ ಲೇವಿಯರಿಗಿಂತ ಹೆಚ್ಚಾದ ಜೇಷ್ಠರನ್ನು ವಿಮೋಚಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.


ಸರ್ವೇಶ್ವರನ ಆಜ್ಞೆಯಂತೆ ವಿಮೋಚನೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು