Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:8 - ಕನ್ನಡ ಸತ್ಯವೇದವು C.L. Bible (BSI)

8 ದೇವದರ್ಶನದ ಗುಡಾರಕ್ಕೆ ಸೇರಿದ ಉಪಕರಣಗಳನ್ನು ನೋಡಿಕೊಳ್ಳಬೇಕು. ಇಸ್ರಯೇಲರ ಪರವಾಗಿ ದೇವಸ್ಥಾನದ ಸೇವಾಕಾರ್ಯಗಳನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:8
13 ತಿಳಿವುಗಳ ಹೋಲಿಕೆ  

ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಬಳಿಕ ದೇವದರ್ಶನದ ಗುಡಾರವನ್ನು ಇಳಿಸಿದ್ದೇ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗ ಈತಮಾರನ ಕೈಕೆಳಗೆ ಇದನ್ನೆಲ್ಲಾ ಮಾಡಬೇಕು.”


ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕರ್ತವ್ಯ ಇದೇ. ಮಹಾಯಾಜಕ ಆರೋನನ ಮಗ ಈತಾಮಾರನು ಅವರ ಮೇಲ್ವಿಚಾರಣೆಯನ್ನು ಮಾಡಬೇಕು


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಅವರು ದೇವದರ್ಶನದ ಗುಡಾರದ ಬಳಿಯಲ್ಲಿರಬೇಕು; ಆರೋನನಿಗೂ ಇಡೀ ಸಮಾಜಕ್ಕೂ ನೆರವಾಗಿ ದೇವಸ್ಥಾನದ ಪರಿಚರ್ಯವನ್ನು ನಡೆಸಬೇಕು.


ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸು. ಇಸ್ರಯೇಲರಲ್ಲಿ ಆರೋನನಿಗೆ ಸಂಪೂರ್ಣ ಶರಣರು ಇವರೇ.


ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು