Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:9 - ಕನ್ನಡ ಸತ್ಯವೇದವು C.L. Bible (BSI)

9 ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸು. ಇಸ್ರಯೇಲರಲ್ಲಿ ಆರೋನನಿಗೆ ಸಂಪೂರ್ಣ ಶರಣರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸಬೇಕು; ಇಸ್ರಾಯೇಲ್ಯರಲ್ಲಿ ಆರೋನನಿಗೆ ಸಂಪೂರ್ಣವಾಗಿ ವಶಮಾಡಲ್ಪಟ್ಟವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸಿಕೊಡು. ಅವರು ಇಸ್ರೇಲರ ಮಧ್ಯದಿಂದ ಆರೋನನಿಗೋಸ್ಕರವಾಗಿ ಪ್ರತಿಷ್ಠಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:9
15 ತಿಳಿವುಗಳ ಹೋಲಿಕೆ  

ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ದೇವದರ್ಶನದ ಗುಡಾರಕ್ಕೆ ಸೇರಿದ ಉಪಕರಣಗಳನ್ನು ನೋಡಿಕೊಳ್ಳಬೇಕು. ಇಸ್ರಯೇಲರ ಪರವಾಗಿ ದೇವಸ್ಥಾನದ ಸೇವಾಕಾರ್ಯಗಳನ್ನು ನಡೆಸಬೇಕು.


ಇಸ್ರಯೇಲರಲ್ಲಿ ಇವರೇ ನನಗೆ ಸಂಪೂರ್ಣವಾಗಿ ಸಮರ್ಪಿತರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಯೇಲರ ಜೇಷ್ಠಪುತ್ರರಿಗೆ, ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.


ಇಸ್ರಯೇಲರ ದೇವರು ತಮ್ಮ ಸಮೂದಾಯದವರಾದ ನಿಮ್ಮನ್ನು ಪ್ರತ್ಯೇಕಿಸಿ ತಮ್ಮ ಗುಡಾರದ ಪರಿಚರ್ಯವನ್ನು ಮಾಡಲು ಹಾಗೂ ಸರ್ವಸಮುದಾಯದ ಸೇವೆಯನ್ನು ಕೈಗೊಳ್ಳಲು ತಮ್ಮ ಬಳಿಯಲ್ಲೇ ಇಟ್ಟುಕೊಂಡರು.


ಹೀಗೆ ಲೇವಿಯರನ್ನು ಇಸ್ರಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.


ಈಗ ಇಸ್ರಯೇಲರ ಚೊಚ್ಚಲು ಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.


ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.


ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ದೇವಸ್ಥಾನದ ಪರಿಚಾರಕರಲ್ಲಿ - ಜೀಹ, ಹಸೂಫ,


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.


ಹಾಗು ದಾವೀದನೂ ಅವನ ಸರದಾರರೂ ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನ ಪರಿಚಾರಕರಲ್ಲಿ ಇನ್ನೂರ ಇಪ್ಪತ್ತು ಮಂದಿಯನ್ನು ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು