ಅರಣ್ಯಕಾಂಡ 30:13 - ಕನ್ನಡ ಸತ್ಯವೇದವು C.L. Bible (BSI)13 ಹೆಂಡತಿ ಮಾಡಿದ ಹರಕೆಯನ್ನು ಹಾಗು ಉಪವಾಸವಿರುವೆನೆಂದು ಅವಳು ಮಾಡಿದ ಪ್ರಮಾಣವನ್ನು ದೃಢೀಕರಿಸುವುದಕ್ಕಾಗಲಿ, ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಹಕ್ಕಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೆಂಡತಿ ಮಾಡಿದ ಹರಕೆಯನ್ನೂ ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವದಕ್ಕಾಗಲಿ ರದ್ದು ಮಾಡುವದಕ್ಕಾಗಲಿ ಗಂಡನಿಗೆ ಅಧಿಕಾರವಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಿರಪಡಿಸುವುದಕ್ಕಾಗಲಿ ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು. ಅಧ್ಯಾಯವನ್ನು ನೋಡಿ |