Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:2 - ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:2
36 ತಿಳಿವುಗಳ ಹೋಲಿಕೆ  

ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II


ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.


ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.


ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.


ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II


ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II


ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.


ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ.


“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II


ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.


ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.


“ಮಡದಿ ಅಂಥ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ


ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II


ನಿಮ್ಮ ಕುಟುಂಬಗಳಿಗಾಗಿ ಊರುಗಳನ್ನೂ ನಿಮ್ಮ ದನಕುರಿಗಳಿಗಾಗಿ ದೊಡ್ಡಿಗಳನ್ನೂ ಕಟ್ಟಿಕೊಂಡು ನಿಮ್ಮ ಮಾತಿನಂತೆ ನಡೆದುಕೊಳ್ಳಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು