Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:9 - ಕನ್ನಡ ಸತ್ಯವೇದವು C.L. Bible (BSI)

9 “ವಿಧವೆ ಇಲ್ಲವೆ ಗಂಡನಿಂದ ಬೇರ್ಪಟ್ಟ ಮಹಿಳೆ ಇಂಥ ಪ್ರಮಾಣವನ್ನು ಕೈಗೊಂಡಿದ್ದರೆ ಅದು ನಿಲ್ಲುತ್ತದೆ. ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂಥ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವದು; ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ವಿಧವೆಯಾಗಲಿ ವಿವಾಹವಿಚ್ಛೇಧನ ಹೊಂದಿದ ಸ್ತ್ರೀಯಾಗಲಿ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇದಲ್ಲದೆ ವಿಧವೆಯಾದರೂ ವಿವಾಹ ವಿಚ್ಛೇದಿತ ಮಹಿಳೆಯಾದರೂ ಇಂತಹ ಹರಕೆ ಇಲ್ಲವೆ ಪ್ರಮಾಣ ಮಾಡಿಕೊಂಡರೆ ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:9
6 ತಿಳಿವುಗಳ ಹೋಲಿಕೆ  

ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಆದರೆ ಗಂಡನು, ಕೇಳಿದಾಗಲೆ ಬೇಡವೆಂದು ಆಜ್ಞೆ ಮಾಡಿದರೆ ಆ ಹರಕೆ ಇಲ್ಲವೆ ಆ ಅವಿಚಾರ ಪ್ರತಿಜ್ಞೆ ನಿರರ್ಥಕವಾಗುತ್ತವೆ. ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


“ಮಡದಿ ಅಂಥ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ


ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು