Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:15 - ಕನ್ನಡ ಸತ್ಯವೇದವು C.L. Bible (BSI)

15 “ನೀವು ಮಹಿಳೆಯರನ್ನೆಲ್ಲ ಉಳಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಅವರಿಗೆ, “ನೀವು ಎಲ್ಲಾ ಹೆಂಗಸರನ್ನು ಉಳಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:15
13 ತಿಳಿವುಗಳ ಹೋಲಿಕೆ  

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!


ಆ ಕಾಲದಲ್ಲಿ ನಾವು ಅವನ ಎಲ್ಲ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು, ಅವುಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು ಹಾಗು ಮಕ್ಕಳನ್ನು ನಿಶ್ಯೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು.


ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.


ಆ ದಿನ ಆಯಿ ಜನರಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ.


ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ನಿಮ್ಮ ದೇವರಾದ ಸರ್ವೇಶ್ವರ ಆ ಪಟ್ಟಣವನ್ನು ನಿಮಗೆ ವಶಪಡಿಸಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರ ಮಾಡಬೇಕು.


ಯುದ್ಧಭೂಮಿಯಿಂದ ಬಂದಿದ್ದ ಆ ಸೈನ್ಯದ ಸಹಸ್ರಾಧಿಪತಿಗಳನ್ನು ಹಾಗು ಶತಾಧಿಪತಿಗಳನ್ನು ಕಂಡು ಮೋಶೆ ಕೋಪಗೊಂಡನು.


ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು