Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:2 - ಕನ್ನಡ ಸತ್ಯವೇದವು C.L. Bible (BSI)

2 “ಮಿದ್ಯಾನರು ಇಸ್ರಯೇಲರಿಗೆ ಮಾಡಿದ ಹಿಂಸೆಗಾಗಿ ನೀನು ಮುಯ್ಯಿತೀರಿಸಬೇಕು. ಅನಂತರ ನಿನ್ನ ಪೂರ್ವಜರ ಬಳಿಗೆ ನೀನು ಸೇರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಇಸ್ರೇಲರಿಗೋಸ್ಕರ ಮಿದ್ಯಾನ್ಯರ ಮೇಲೆ ಆಕ್ರಮಣಮಾಡಿ ಸೇಡು ತೀರಿಸಿಕೊ. ಇದಾದ ನಂತರ ನೀನು ಸಾಯುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:2
30 ತಿಳಿವುಗಳ ಹೋಲಿಕೆ  

ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಜನರು ಸಂಸೋನನನ್ನು ನೋಡಿ : ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಆಗ ಮೋಶೆ ಇಸ್ರಯೇಲರಿಗೆ, “ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಕಾಲಾಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಿ.


ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು.


ಅಲ್ಲಿ ಆರೋನನ ಯಾಜಕ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಜರ ಬಳಿ ಸೇರಲಿ,” ಎಂದು ವಿಧಿಸಿದರು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.


ಸರ್ವೇಶ್ವರ ಸ್ವಾಮಿ ಮೋಶೆಗೆ:


ನೀವಾದರೋ ನದಿ ದಾಟಿ ಆ ಸುಂದರ ನಾಡನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು