Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:20 - ಕನ್ನಡ ಸತ್ಯವೇದವು C.L. Bible (BSI)

20 ಎಲ್ಲ ಬಟ್ಟೆಬರೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತ್ರಗಳನ್ನೂ ಹಾಗು ಮರದ ಸಾಮಾನುಗಳನ್ನೂ ಶುದ್ಧಮಾಡಿಕೊಳ್ಳಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನನ್ನೂ ಮೇಕೇಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧಮಾಡಿಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧ ಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:20
6 ತಿಳಿವುಗಳ ಹೋಲಿಕೆ  

ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.”


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.


ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು