Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:29 - ಕನ್ನಡ ಸತ್ಯವೇದವು C.L. Bible (BSI)

29 ಇವುಗಳಲ್ಲಿ ಐನೂರರಲ್ಲಿ ಒಂದರ ಮೇರೆಗೆ ಸರ್ವೇಶ್ವರನಿಗೋಸ್ಕರ ಕಪ್ಪವನ್ನು ತೆಗೆದುಕೊಳ್ಳಿ. ಇದನ್ನು ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು ಆತನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪಕಾಣಿಕೆಯನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:29
7 ತಿಳಿವುಗಳ ಹೋಲಿಕೆ  

ನೀವು ನಿಮ್ಮ ನಾಡಿನಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಇದು ನೆನಪಿರಲಿ.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


“ಲೇವಿಯರಿಗೆ ನೀನು ಇಂತೆಂದು ಆಜ್ಞಾಪಿಸು - ‘ನಿಮ್ಮ ಸ್ವಂತಕ್ಕಾಗಿ ನಾನು ಗೊತ್ತುಮಾಡಿರುವ ಹತ್ತನೆಯ ಒಂದು ಪಾಲನ್ನು ಇಸ್ರಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಒಂದು ಪಾಲನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.


ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ


ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.


ಇಸ್ರಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಪಾಲಿನಲ್ಲಿ ನೀವು ಸರ್ವೇಶ್ವರನಿಗೆ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯಾಜಕ ಆರೋನನಿಗೆ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು