Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:50 - ಕನ್ನಡ ಸತ್ಯವೇದವು C.L. Bible (BSI)

50 ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:50
10 ತಿಳಿವುಗಳ ಹೋಲಿಕೆ  

“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.


ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.


ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


“ನಿಮ್ಮ ದಾಸರಾದ ನಾವು ನಮ್ಮ ಅಧಿಕಾರಕ್ಕೆ ಒಳಪಟ್ಟ ಸೈನಿಕರನ್ನು ಲೆಕ್ಕಿಸಿದಾಗ ಒಬ್ಬನಾದರೂ ಕಡಿಮೆ ಆಗಿಲ್ಲವೆಂದು ಗೊತ್ತಾಯಿತು.


ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನೂ ವಿಚಿತ್ರ ಆಭರಣಗಳನ್ನೂ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು