Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:6 - ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:6
17 ತಿಳಿವುಗಳ ಹೋಲಿಕೆ  

ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇಹತ್ತಿದರು. ಸರ್ವೇಶ್ವರನ ಒಡಂಬಡಿಕೆಯಾದ ಮಂಜೂಷವಾಗಲಿ, ಮೋಶೆಯಾಗಲಿ ಪಾಳೆಯನ್ನು ಬಿಟ್ಟು ಹೊರಡಲಿಲ್ಲ.


ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,


ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).


ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.


ನಾನು ನಿಮಗೆ ತೋರಿಸುವ ಮಾದರಿಯ ಪ್ರಕಾರವೇ ಆ ಗುಡಾರವನ್ನೂ ಅದರಲ್ಲಿನ ಎಲ್ಲ ಸಾಮಾಗ್ರಿಗಳನ್ನೂ ಮಾಡಿಸಬೇಕು.


ಅಂತೆಯೇ ಇಸ್ರಯೇಲರು ಕುಲ ಒಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.


ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು


“ಕಾಳಗ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಯೋಧರಿಗೆ, ‘ಇಸ್ರಯೇಲರೇ, ಕೇಳಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿದೆ; ನೀವು ಎದೆಗೆಡಬಾರದು, ದಿಗಿಲುಪಡಬಾರದು, ನಡುಗಬಾರದು, ಶತ್ರುಗಳಿಗೆ ಭಯಪಡಬಾರದು.


ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು