Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:14 - ಕನ್ನಡ ಸತ್ಯವೇದವು C.L. Bible (BSI)

14 ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈಗ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲ್ಯರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:14
19 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಯಾರನ್ನು ಅಣಕಿಸಿ ಹಾಸ್ಯಮಾಡುತ್ತಿದ್ದೀರಿ? ಯಾರನ್ನು ನೋಡಿ ಬಾಯಿಕಿಸಿದು ನಾಲಿಗೆಯನ್ನು ಚಾಚುತ್ತೀರಿ?


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.


ಆಗ ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆ ಮಾಡಿಕೊಂಡು ಇಸ್ರಯೇಲರ ಅಪರಾಧವನ್ನು ಹೆಚ್ಚಿಸಿ ಇದ್ದೀರಿ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.


ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


“ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿ; ನೀವು ನಮ್ಮ ಪಾಪಾಪರಾಧಗಳ ಜೊತೆಗೆ ಸರ್ವೇಶ್ವರನಿಗೆ ವಿರುದ್ಧ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರೋ? ನಮ್ಮ ಅಪರಾಧ ದೊಡ್ಡದು; ಇಸ್ರಯೇಲರ ಮೇಲಿರುವ ದೈವಕೋಪ ಉಗ್ರವಾಗಿದೆ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು