ಅರಣ್ಯಕಾಂಡ 32:17 - ಕನ್ನಡ ಸತ್ಯವೇದವು C.L. Bible (BSI)17 ಆದರೆ ನಾವು ಇಸ್ರಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವ ತನಕ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆಯೇ ನಡೆಯುತ್ತೇವೆ. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಕೋಟೆ ಕಟ್ಟಿದ ಊರುಗಳಲ್ಲಿ ವಾಸಿಸಲಿ. ಏಕೆಂದರೆ ಈ ನಾಡಿನ ನಿವಾಸಿಗಳ ಭಯವಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾವಾದರೋ ಇಸ್ರಾಯೇಲ್ಯರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೊತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು. ಅಧ್ಯಾಯವನ್ನು ನೋಡಿ |