Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:27 - ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರು ತಮ್ಮ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಸಮ್ಮುಖದಲ್ಲೇ ಮುನ್ನಡೆದು, ನದಿಯನ್ನು ದಾಟಿ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ದಾಸರಾದ ನಮ್ಮಲ್ಲಿ ಯುದ್ಧ ಸನ್ನದ್ಧರೆಲ್ಲರೂ ಸ್ವಾವಿುಯವರ ಅಪ್ಪಣೆಯ ಮೇರೆಗೆ ಯೆಹೋವನ ಮುಂದುಗಡೆಯಲ್ಲಿ ಹೊರಟು ಹೊಳೆಯನ್ನು ದಾಟಿ ಯುದ್ಧಮಾಡುವೆವು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:27
9 ತಿಳಿವುಗಳ ಹೋಲಿಕೆ  

ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.


“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.


ಆದರೆ ನಾವು ಇಸ್ರಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವ ತನಕ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆಯೇ ನಡೆಯುತ್ತೇವೆ. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಕೋಟೆ ಕಟ್ಟಿದ ಊರುಗಳಲ್ಲಿ ವಾಸಿಸಲಿ. ಏಕೆಂದರೆ ಈ ನಾಡಿನ ನಿವಾಸಿಗಳ ಭಯವಿದೆ.


ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.


ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, “ಗುರುವೇ, ಅವರಿಗೆ ಅದು ಬೇಡವೆನ್ನಬೇಕು ಎಂದು ವಿನಂತಿಸಿದನು.


ಮೋಶೆ ಅವರ ಬಗ್ಗೆ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಹಾಗು ಇಸ್ರಯೇಲರ ಕುಲನಾಯಕರಿಗೂ ಹೀಗೆಂದು ಆಜ್ಞೆಮಾಡಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು