Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:5 - ಕನ್ನಡ ಸತ್ಯವೇದವು C.L. Bible (BSI)

5 ಆದಕಾರಣ ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಜೋರ್ಡನ್ ನದಿಯ ಆಚೆಗೆ ಬರಮಾಡಬೇಡಿ. ಈ ಪ್ರದೇಶವನ್ನೇ ಸೊತ್ತಾಗಿ ಕೊಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದಕಾರಣ ನೀವು ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಯೊರ್ದನ್ ಹೊಳೆಯ ಆಚೆಗೆ ಬರಮಾಡದೆ ಈ ಪ್ರದೇಶವನ್ನೇ ಸ್ವಾಸ್ತ್ಯಕ್ಕಾಗಿ ಕೊಡಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಈ ಪ್ರದೇಶವನ್ನೇ ನಮಗೆ ಸ್ವಾಸ್ತ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವಂತೆ ಮಾಡಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:5
11 ತಿಳಿವುಗಳ ಹೋಲಿಕೆ  

ಇದು ಸರ್ವೇಶ್ವರನಾದ ನನ್ನ ನುಡಿ. ಅಳಿದುಳಿದಾ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯಿತು. ಇಸ್ರಯೇಲ್ ಶಾಂತಿಯನ್ನು ಅರಸುತ್ತಾ ಹೋಗುವಾಗ


ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.


ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;


ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.


ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳಿವೆ.


ಅವರಿಗೆ ಮೋಶೆ, “ನಿಮ್ಮ ಬಂಧುಬಳಗದವರು ಯುದ್ಧಕ್ಕೆ ಹೊರಡುವಾಗ ನೀವು ಇಲ್ಲೇ ಕೂತಿರಬೇಕೆನ್ನುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು