Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:6 - ಕನ್ನಡ ಸತ್ಯವೇದವು C.L. Bible (BSI)

6 ಅವರಿಗೆ ಮೋಶೆ, “ನಿಮ್ಮ ಬಂಧುಬಳಗದವರು ಯುದ್ಧಕ್ಕೆ ಹೊರಡುವಾಗ ನೀವು ಇಲ್ಲೇ ಕೂತಿರಬೇಕೆನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಅವರಿಗೆ - ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕೂತಿರಬೇಕೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಶೆಯು ರೂಬೇನ್ ಮತ್ತು ಗಾದ್ ಕುಲಗಳವರಿಗೆ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕುಳಿತಿರಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:6
6 ತಿಳಿವುಗಳ ಹೋಲಿಕೆ  

ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.


ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.


ಆದಕಾರಣ ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಜೋರ್ಡನ್ ನದಿಯ ಆಚೆಗೆ ಬರಮಾಡಬೇಡಿ. ಈ ಪ್ರದೇಶವನ್ನೇ ಸೊತ್ತಾಗಿ ಕೊಡಿ,” ಎಂದು ಕೇಳಿಕೊಂಡರು.


ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನಾಡಿಗೆ ಅವರು ಹೋಗದಂತೆ ನೀವೇಕೆ ಅಧೈರ್ಯವನ್ನು ಹುಟ್ಟಿಸುತ್ತೀರಿ?


ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು