Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:1 - ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಮತ್ತು ಆರೋನರ ಮುಂದಾಳತ್ವದಲ್ಲಿ ಈಜಿಪ್ಟ್ ದೇಶದಿಂದ ಸೈನ್ಯ ಸೈನ್ಯವಾಗಿ ಹೊರಟ ಇಸ್ರಯೇಲರ ಪಯಣದ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ಆರೋನರ ಕೈಕೆಳಗೆ ಐಗುಪ್ತದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲ್ಯರ ಪ್ರಯಾಣಗಳ ವಿವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:1
11 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.


ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಇಸ್ರಯೇಲರು ತಮ್ಮ ಪ್ರಯಾಣಗಳಲ್ಲಿ ತಂಗಿದ್ದ ಸ್ಥಳಗಳ ಹೆಸರುಗಳನ್ನು ಮೋಶೆ ಸರ್ವೇಶ್ವರನ ಅಪ್ಪಣೆಯನ್ನು ಪಡೆದು ಬರೆದಿಟ್ಟನು.


ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II


“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು