Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:38 - ಕನ್ನಡ ಸತ್ಯವೇದವು C.L. Bible (BSI)

38 ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಮಹಾಯಾಜಕ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ನಾಲ್ವತ್ತನೆಯ ವರುಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:38
5 ತಿಳಿವುಗಳ ಹೋಲಿಕೆ  

(ಇಸ್ರಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಸಮಾಧಿಮಾಡಿದರು. ಅವನ ಮಗ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.


ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು.


ಆರೋನನು ಅಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತು ವರ್ಷ ವಯಸ್ಸಾಗಿತ್ತು.


ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು