Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:52 - ಕನ್ನಡ ಸತ್ಯವೇದವು C.L. Bible (BSI)

52 ಆ ನಾಡಿನ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಡಿ. ಅವರ ವಿಚಿತ್ರ ಕಲ್ಲುಗಳನ್ನು ಹಾಗು ಲೋಹವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:52
18 ತಿಳಿವುಗಳ ಹೋಲಿಕೆ  

“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಸರ್ವೇಶ್ವರ ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.


ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.


ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು