ಅರಣ್ಯಕಾಂಡ 33:55 - ಕನ್ನಡ ಸತ್ಯವೇದವು C.L. Bible (BSI)55 ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ ಪಕ್ಕೆ ತಿವಿಯುವ ಶೂಲಗಳಂತೆಯೂ ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು. ಅಧ್ಯಾಯವನ್ನು ನೋಡಿ |