Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:1 - ಕನ್ನಡ ಸತ್ಯವೇದವು C.L. Bible (BSI)

1 ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ನಗರದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರಿಕೊ ಪಟ್ಟಣದ ಆಚೆಕಡೆಯಲ್ಲಿ ಜೋರ್ಡನ್ ನದಿಯ ತೀರದ ಬಳಿಯಿಂದ ಮೋವಾಬ್ಯರ ಬಯಲಿನಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:1
12 ತಿಳಿವುಗಳ ಹೋಲಿಕೆ  

ಇಸ್ರಯೇಲರು ಪ್ರಯಾಣಮಾಡಿ ಜೋರ್ಡನ್ ನದಿತೀರದಲ್ಲಿ ಜೆರಿಕೋ ನಗರಕ್ಕೆ ಹತ್ತಿರವಿರುವ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:


ಹೀಗೆ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಆಸ್ತಿಪಾಸ್ತಿಯನ್ನೂ ತೆಗೆದುಕೊಂಡು ಜೆರಿಕೋ ಪಟ್ಟಣದ ಎದುರಿಗಿರುವ ಜೋರ್ಡನ್ ನದಿಯ ತೀರಕ್ಕೆ ಬಂದರು. ಅಲ್ಲಿ ಮೋವಾಬ್ಯರ ಮೈದಾನದ ಪಾಳೆಯದಲ್ಲಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್ ಹಾಗು ಇಸ್ರಯೇಲರ ಸರ್ವಸಮಾಜದವರ ಬಳಿಗೆ ಬಂದರು.


ಜೋರ್ಡನ್ ನದಿ ತೀರದಲ್ಲಿ, ಜೆರಿಕೋ ಪಟ್ಟಣದ ಹತ್ತಿರವಿದ್ದ ಮೋವಾಬ್ಯರ ಮೈದಾನದಲ್ಲಿ ಮೋಶೆ ಮತ್ತು ಯಾಜಕ ಎಲ್ಲಾಜಾರನು ಇಸ್ರಯೇಲರ ಜನಗಣತಿ ಮಾಡಿದಾಗ ಇದ್ದ ಜನಸಂಖ್ಯೆ ಇದು.


ಆದರೆ ಲೇವಿಯರ ಸೊತ್ತಾಗಿರುವ ಪೇಟೆಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಲೇವಿಯರಿಗೆ ಯಾವಾಗಲು ಇರುವುದು.


ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು.


ಕಾನಾನ್ ನಾಡಿನಲ್ಲಿ ಇಸ್ರಯೇಲರಿಗೆ ಸೊತ್ತನ್ನು ಹಂಚಿಕೊಡುವುದಕ್ಕೆ ಸರ್ವೇಶ್ವರ ಇವರೆಲ್ಲರನ್ನು ನೇಮಿಸಿದರು.


“ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಾಡನ್ನು ಹಂಚಿಕೊಂಡರು.


ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.


ಹೀಗೆಯೇ ಇಸ್ರಯೇಲರು ಲೇವಿಯರ ವಾಸಕ್ಕಾಗಿ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಫಲವತ್ತಾದ ಭೂಮಿಗಳನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು