Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:17 - ಕನ್ನಡ ಸತ್ಯವೇದವು C.L. Bible (BSI)

17 ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಕಲ್ಲಿನಿಂದ ಮತ್ತೊಬ್ಬನನ್ನೂ ಹೊಡೆದುಕೊಂದರೆ ಅವನೂ ನರಹತ್ಯಗಾರನೇ; ಅಂಥವನಿಗೂ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯಮಾಡಿದವನೇ; ಅವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:17
5 ತಿಳಿವುಗಳ ಹೋಲಿಕೆ  

“ಇಬ್ಬರು ಜಗಳವಾಡುತ್ತಿರಲು ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಲೋ ಮುಷ್ಟಿಯಿಂದಲೋ ಹೊಡೆದುದರಿಂದ ಅವನು ಸಾಯದೆ ಗಾಯಗೊಂಡು ‘ಕೆಲವು ಕಾಲ ಹಾಸಿಗೆ ಹಿಡಿದಿರಬಹುದು, ಅನಂತರ ಎದ್ದು ಕೋಲೂರಿ ತಿರುಗಾಡುತ್ತಿರಬಹುದು.


ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧದಿಂದ ಮತ್ತೊಬ್ಬನನ್ನು ಹೊಡೆದುಕೊಂದರೆ ಅವನೂ ನರಹತ್ಯಗಾರನೇ. ಅಂಥವನಿಗೂ ಮರಣಶಿಕ್ಷೆಯಾಗಬೇಕು.


ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು