Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:2 - ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:2
14 ತಿಳಿವುಗಳ ಹೋಲಿಕೆ  

ಜುದೇಯದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು; ಅದರ ಅಗಲ ಹನ್ನೆರಡುವರೆ ಕಿಲೋಮೀಟರ್, ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.


ರಾಜನ ಪಾಲಿನ ಎರಡು ಭಾಗಗಳ ನಡುವಣ ಲೇವಿಯರ ಪಾಲಿನ ಉತ್ತರದ ಮೇರೆಯಿಂದ ರಾಜಧಾನಿಗೆ ಒಳಪಟ್ಟ ಭೂಮಿಯ ದಕ್ಷಿಣ ಮೇರೆಯ ತನಕ ಅಂದರೆ ಯೆಹೂದ್ಯದ ದಕ್ಷಿಣ ಸರಹದ್ದಿನಿಂದ ಬೆನ್ಯಾಮೀನಿನ ಸರಹದ್ದಿನವರೆಗೆ ರಾಜನ ಪಾಲು ಹರಡಿರುವುದು.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ನಗರದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -


ಆ ಊರುಗಳು ಲೇವಿಯರ ನಿವಾಸಕ್ಕೆ ಆಗುವುದು; ಅವುಗಳ ಸುತ್ತಲಿನ ಭೂಮಿಗಳು ಅವರ ದನಕುರಿ, ಪ್ರಾಣಿಪಶುಗಳ ಪ್ರಯೋಜನಕ್ಕಾಗುವುದು.


“ಇಸ್ರಯೇಲರ ಯಾವುದಾದರೊಂದು ಊರಲ್ಲಿ ಇಳಿದುಕೊಂಡಿದ್ದ ಒಬ್ಬ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ಬರಬಹುದು.


ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.


ಇದಲ್ಲದೆ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದ ಆರೋನನ ಸಂತಾನದ ಯಾಜಕರಿಗೆ ಪಾಲುಕೊಡುತ್ತಿದ್ದರು. ಯಾಜಕ ಸಂತಾನದ ಎಲ್ಲ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸಲಾದ ಪುರುಷರಿದ್ದರು.


“ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.


ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಪಾಲುಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡೆಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಆಸ್ತಿಯಿದ್ದಲ್ಲಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು