Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:32 - ಕನ್ನಡ ಸತ್ಯವೇದವು C.L. Bible (BSI)

32 ಆಶ್ರಯನಗರಕ್ಕೆ ಓಡಿಹೋದವನಿಂದ ನೀವು ಹಣವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಂತ ಊರಿಗೆ ಹೋಗಬಿಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀವು ಆಶ್ರಯ ನಗರಕ್ಕೆ ಓಡಿ ಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:32
8 ತಿಳಿವುಗಳ ಹೋಲಿಕೆ  

ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯ ಬೆಳ್ಳಿಬಂಗಾರದಿಂದ ತೀರಲಾರದು; ಇಸ್ರಯೇಲರನ್ನು ಕೊಲ್ಲುವ ಅಧಿಕಾರ ನಮಗಿಲ್ಲ,” ಎಂದು ಉತ್ತರಕೊಟ್ಟರು. ಅರಸನು ಅವರಿಗೆ, “ಏನು ಮಾಡಬೇಕು ಹೇಳಿ; ಮಾಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು