Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:34 - ಕನ್ನಡ ಸತ್ಯವೇದವು C.L. Bible (BSI)

34 ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು; ಯೆಹೋವನೆಂಬ ನಾನೇ ಇಸ್ರಾಯೇಲ್ಯರ ನಡುವೆ ಆ ದೇಶದಲ್ಲಿ ವಾಸಿಸುತ್ತೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:34
20 ತಿಳಿವುಗಳ ಹೋಲಿಕೆ  

ಅಂಥವರು ಗಂಡಸರೇ ಆಗಿರಲಿ, ಹೆಂಗಸರೇ ಆಗಿರಲಿ, ಅವರೆಲ್ಲರನ್ನು ಪಾಳೆಯದಿಂದ ಹೊರಡಿಸಬೇಕು. ನಾನೇ ವಾಸವಾಗಿರುವ ಪಾಳೆಯವನ್ನು ಅವರು ಅಪವಿತ್ರಗೊಳಿಸಬಾರದು.


ಜೆರುಸಲೇಮಿನಲ್ಲಿ ವಾಸಿಸುವ ಪ್ರಭು ಘನಹೊಂದಲಿ I ಆತನ ಕೀರ್ತಿ ಸಿಯೋನಿನಿಂದ ಹಬ್ಬಿಹರಡಲಿ I ಅಲ್ಲೆಲೂಯ! II


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


“ಎಂದೆಂದಿಗು ಇದೇ ನನ್ನ ನಿವಾಸ I ಇರುವೆನಿಲ್ಲೇ, ಇದು ನನ್ನ ಅಭಿಲಾಶ II


ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.


ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


“ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.


ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.


“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು