Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:1 - ಕನ್ನಡ ಸತ್ಯವೇದವು C.L. Bible (BSI)

1 ಜೋಸೆಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಹಾಗು ಇಸ್ರಯೇಲ್ ಕುಲನಾಯಕರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಬಳಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳ ಬಳಿಗೂ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಗಿಲ್ಯಾದ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾದನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:1
7 ತಿಳಿವುಗಳ ಹೋಲಿಕೆ  

ಜೋಸೆಫನ ಕುಮಾರ ಮನಸ್ಸೆಯ ವಂಶಕ್ಕೆ ಸೇರಿದವನು ಚಲ್ಪಹಾದ ಎಂಬವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಹೆಣ್ಣು ಮಕ್ಕಳಿದ್ದರು.


ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು.


ಇವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್, ಕುಲಾಧಿಪತಿಗಳು ಹಾಗು ಸರ್ವಸಮೂಹದವರ ಮುಂದೆ ಬಂದು ತಮ್ಮ ಒಂದು ವಿಜ್ಞಾಪನೆಯನ್ನು ಮುಂದಿಟ್ಟರು:


ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು