Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:13 - ಕನ್ನಡ ಸತ್ಯವೇದವು C.L. Bible (BSI)

13 ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞಾವಿಧಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರಿಗೆ ಆಜ್ಞಾಪಿಸಿದ ಆಜ್ಞೆಗಳೂ, ನ್ಯಾಯಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:13
12 ತಿಳಿವುಗಳ ಹೋಲಿಕೆ  

ಇವೇ ಸರ್ವೇಶ್ವರನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞೆಗಳು.


ಇಸ್ರಯೇಲರು ಪ್ರಯಾಣಮಾಡಿ ಜೋರ್ಡನ್ ನದಿತೀರದಲ್ಲಿ ಜೆರಿಕೋ ನಗರಕ್ಕೆ ಹತ್ತಿರವಿರುವ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ನಗರದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:


ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು.


ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.


ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.


ಇದೇ ಪಶು, ಪಕ್ಷಿ, ಜಲಚರ ಹಾಗು ಕ್ರಿಮಿಕೀಟಗಳ ವಿಷಯವಾದ ವಿಧಿ.


ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು