ಅರಣ್ಯಕಾಂಡ 36:2 - ಕನ್ನಡ ಸತ್ಯವೇದವು C.L. Bible (BSI)2 “ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವಾಸ್ತ್ಯವನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದೂ ಅಪ್ಪಣೆ ಮಾಡಿದನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು. ಅಧ್ಯಾಯವನ್ನು ನೋಡಿ |