Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:6 - ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆ ಮಾಡಿಕೊಳ್ಳಬೇಕೆಂದು ಯೆಹೋವನು ಅಪ್ಪಣೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದಕಾರಣ ಚಲ್ಫಹಾದನ ಹೆಣ್ಣುಮಕ್ಕಳು ಮದುವೆಯಾಗುವುದಾದರೆ ತಮ್ಮ ತಂದೆಯ ಗೋತ್ರಕ್ಕೆ ಸಂಬಂಧಿಸಿದ ಯಾರನ್ನು ಬೇಕಾದರೂ ಮದುವೆಯಾಗಬಹುದೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಚಲ್ಪಹಾದನ ಪುತ್ರಿಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನೆಂದರೆ: ಅವರು ತಮ್ಮ ಮನಸ್ಸು ಬಂದವರೊಂದಿಗೆ ಮದುವೆಮಾಡಿಕೊಳ್ಳಲಿ, ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದವರಿಗೆ ಮಾತ್ರ ಮದುವೆ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:6
7 ತಿಳಿವುಗಳ ಹೋಲಿಕೆ  

ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು.


ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ.


ಆಗ ಮೋಶೆ ಸರ್ವೇಶ್ವರನಿಂದ ಅಪ್ಪಣೆಯನ್ನು ಹೊಂದಿ ಇಸ್ರಯೇಲರಿಗೆ, “ಜೋಸೆಫನ ಕುಲದವರು ಹೇಳುವ ಮಾತು ನ್ಯಾಯವಾದುದು.


ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು