ಅರಣ್ಯಕಾಂಡ 4:12 - ಕನ್ನಡ ಸತ್ಯವೇದವು C.L. Bible (BSI)12 ದೇವಸ್ಥಾನದ ಸೇವೋಪಕರಣಗಳನ್ನೆಲ್ಲಾ ನೀಲಿ ಬಟ್ಟೆಯಲ್ಲಿಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವಸ್ಥಾನದ ಸೇವೋಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು ಕಡಲುಹಂದಿಯ ತೊಗಲನ್ನು ಹೊದಿಸಿ ಅಡ್ಡದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಬಳಿಕ ಆರಾಧನೆಗಾಗಿ ಪವಿತ್ರಸ್ಥಳದಲ್ಲಿ ಉಪಯೋಗಿಸಲ್ಪಡುವ ಎಲ್ಲಾ ವಿಶೇಷ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳನ್ನು ನೀಲಿಬಟ್ಟೆಯಿಂದ ಮುಚ್ಚಬೇಕು. ಬಳಿಕ ಅವುಗಳಿಗೆ ಶ್ರೇಷ್ಠವಾದ ತೊಗಲನ್ನು ಹೊದಿಸಬೇಕು. ಅವರು ಈ ವಸ್ತುಗಳನ್ನು ಹೊರುವುದಕ್ಕಾಗಿ ಚೌಕಟ್ಟಿಗೆ ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವ ಸೇವೆಯ ಎಲ್ಲಾ ಸಲಕರಣೆಗಳನ್ನು ಅವರು ತೆಗೆದುಕೊಂಡು ನೀಲಿ ವಸ್ತ್ರದಿಂದ ಕಟ್ಟಿ, ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ, ಅಡ್ಡ ದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿ |