Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:14 - ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಠಿಕೆಗಳು, ಮುಳ್ಳುಗಳು, ಸಲಿಕೆಗಳು ಹಾಗೂ ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಗೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಕಡಲುಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:14
7 ತಿಳಿವುಗಳ ಹೋಲಿಕೆ  

ಅವನು ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿ ಇವು: ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಅದರ ಮೇಲೆ ಹಸನಾದ ತೊಗಲನ್ನು ಮತ್ತು ನೀಲಿ ಬಟ್ಟೆಯನ್ನು ಹೊದಿಸಬೇಕು. (ಮಂಜೂಷದ ಬಳೆಗಳಿಗೆ) ಹೊರುವ ಕೋಲುಗಳನ್ನು ಸಿಕ್ಕಿಸಬೇಕು.


ಬಲಿಪೀಠದ ಬೂದಿಯನ್ನು ತೆಗೆದುಬಿಟ್ಟು ಆ ಪೀಠದ ಮೇಲೆ ಊದಾ ವರ್ಣದ ಬಟ್ಟೆಯನ್ನು ಹಾಸಿ


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು