Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:20 - ಕನ್ನಡ ಸತ್ಯವೇದವು C.L. Bible (BSI)

20 ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:20
11 ತಿಳಿವುಗಳ ಹೋಲಿಕೆ  

ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.


ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಪರಮ ಪವಿತ್ರವಾದ ವಸ್ತುಗಳ ಹತ್ತಿರಕ್ಕೆ ಬರುವಾಗ ಅವರು ಸಾಯದಂತೆ ಎಚ್ಚರಿಕೆ ವಹಿಸಿರಿ. ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಅವರವರ ಕೆಲಸಗಳನ್ನು ಹೊರಬೇಕಾದ ಹೊರೆಗಳನ್ನು ಗೊತ್ತುಮಾಡಬೇಕು.


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆ ಇದು:


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು