Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:22 - ಕನ್ನಡ ಸತ್ಯವೇದವು C.L. Bible (BSI)

22-23 “ನೀನು ಗೇರ್ಷೋನ್ಯರನ್ನು ಲೆಕ್ಕಿಸಬೇಕು. ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬದ ಪ್ರಕಾರ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22-23 ನೀನು ಗೇರ್ಷೋನ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 “ನೀನು ಗೇರ್ಷೋನ್ಯರನ್ನು ಕುಟುಂಬಗಳಿಗನುಸಾರವಾಗಿ ಮತ್ತು ಕುಲಗಳಿಗನುಸಾರವಾಗಿ ಲೆಕ್ಕಿಸು. ಅಲ್ಲದೆ ದೇವದರ್ಶನಗುಡಾರದ ಸೇವೆಯನ್ನು ಮಾಡಲು ಯೋಗ್ಯರಾದ ಗಂಡಸರನ್ನು ಪಟ್ಟಿಮಾಡು. ಅವರ ವಯಸ್ಸು ಮೂವತ್ತರಿಂದ ಐವತ್ತು ವರ್ಷದೊಳಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:22
5 ತಿಳಿವುಗಳ ಹೋಲಿಕೆ  

ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥ ಲಾಯೇಲನ ಮಗ ಎಲ್ಯಾಸಾಫ್.


ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರು ಶಿಮ್ಮೀ ಗೋತ್ರದವರೂ ಇದ್ದರು.


ಇವರು ಗೋತ್ರಸ್ಥಾಪಕರು. ಗೋತ್ರಸ್ಥಾಪಕ ಗೇರ್ಷೋನನ ಮಕ್ಕಳು - ಲಿಬ್ನಿ, ಶಿಮ್ಮೀ ಎಂಬುವರು.


ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು