Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:24 - ಕನ್ನಡ ಸತ್ಯವೇದವು C.L. Bible (BSI)

24 “ಪರಿಚರ್ಯ ಮಾಡುವುದರಲ್ಲೂ ಹೊರೆಗಳನ್ನು ಹೊರುವುದರಲ್ಲೂ ಗೇರ್ಷೋನ್ಯರು ಮಾಡಬೇಕಾದ ಕರ್ತವ್ಯ ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪರಿಚರ್ಯ ಮಾಡುವದರಲ್ಲಿಯೂ ಹೊರೆಗಳನ್ನು ಹೊರುವದರಲ್ಲಿಯೂ ಗೇರ್ಷೋನ್ಯರು ಮಾಡಬೇಕಾದ ಸೇವೆ ಯಾವದಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆಯಲ್ಲಿಯೂ ಗೇರ್ಷೋನ್ಯರು ಮಾಡತಕ್ಕ ಕೆಲಸ ಯಾವುದೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಗೇರ್ಷೋನ್ಯರ ಕುಟುಂಬಗಳ ಸೇವೆಯೂ ಜವಾಬ್ದಾರಿಕೆ ಯಾವುದೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:24
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು.


ಗೇರ್ಷೋನ್ಯರು ಹೊರೆ ಹೊರುವುದರಲ್ಲೂ ಬೇರೆ ಪರಿಚರ್ಯ ಮಾಡುವುದರಲ್ಲೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.


ಪರಮ ಪವಿತ್ರವಾದ ವಸ್ತುಗಳ ಹತ್ತಿರಕ್ಕೆ ಬರುವಾಗ ಅವರು ಸಾಯದಂತೆ ಎಚ್ಚರಿಕೆ ವಹಿಸಿರಿ. ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಅವರವರ ಕೆಲಸಗಳನ್ನು ಹೊರಬೇಕಾದ ಹೊರೆಗಳನ್ನು ಗೊತ್ತುಮಾಡಬೇಕು.


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಗುಡಾರ, ಅದರ ಮೇಲಿದ್ದ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ


ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು - ಅಂದರೆ; ಗುಡಾರ ಅದರ ಹೊದಿಕೆ ಅದರ ಮೇಲಿನ ಹಸನಾದ ತೊಗಲಿನ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಿನ ಪರದೆ,


ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ


ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.


ಬಳಿಕ ದೇವದರ್ಶನದ ಗುಡಾರವನ್ನು ಇಳಿಸಿದ್ದೇ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು