ಅರಣ್ಯಕಾಂಡ 4:49 - ಕನ್ನಡ ಸತ್ಯವೇದವು C.L. Bible (BSI)49 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ ಹೊರೆಯೂ ಗೊತ್ತು ಮಾಡಲ್ಪಟ್ಟಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನೂ ಲೆಕ್ಕಿಸಲ್ಪಟ್ಟನು. ಪ್ರತಿಯೊಬ್ಬನಿಗೂ ವರ್ಗಾವಣೆಗಾಗಿ ವಸ್ತುಗಳನ್ನು ಕಟ್ಟುವ ಮತ್ತು ವರ್ಗಾವಣೆ ಕೆಲಸದ ಕರ್ತವ್ಯಗಳನ್ನು ಗೊತ್ತುಪಡಿಸಲಾಯಿತು. ಯೆಹೋವನು ಆಜ್ಞಾಪಿಸಿದ ಮೇರೆಗೆ ಇದು ಮಾಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು. ಅಧ್ಯಾಯವನ್ನು ನೋಡಿ |