ಅರಣ್ಯಕಾಂಡ 5:18 - ಕನ್ನಡ ಸತ್ಯವೇದವು C.L. Bible (BSI)18 ಯಾಜಕನು ಆಕೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಕೂದಲನ್ನು ಕೆದರಿಸಿ, ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿಡಬೇಕು; ಶಾಪವನ್ನು ತರುವ ವಿಷಕರವಾದ ನೀರನ್ನು ತನ್ನ ಕೈಯಲ್ಲೇ ಹಿಡಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು ಆ ಸ್ತ್ರೀಯನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಹಾದರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾಜಕನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಆಕೆಯ ದೋಷವನ್ನು ಹೊರಪಡಿಸುವ ಧಾನ್ಯಸಮರ್ಪಣೆಯನ್ನು ಅವಳ ಕೈಯಲ್ಲಿ ಇಡಬೇಕು. ಅದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆ. ಅದೇ ಸಮಯದಲ್ಲಿ ಶಾಪವನ್ನು ಉಂಟುಮಾಡುವ ನೀರಿನ ವಿಶೇಷ ಪಾತ್ರೆಯನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು. ಅಧ್ಯಾಯವನ್ನು ನೋಡಿ |
ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.